ಮಂಗಳೂರು:- ಅಕಾಡೆಮಿ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ ಧೀ ಶಕ್ತಿ ಜ್ಞಾನ ಯೋಗ ವತಿಯಿಂದ ಅಕಾಡೆಮಿಯ ಸಿರಿಚಾವಡಿಯಲ್ಲಿ ಧೀ ಶಕ್ತಿ ಜ್ಞಾನ ಯೋಗದ ಗುರೂಜಿ ರವರಿಂದ “ಯೋಗಾಯನೊ” (ಉಚಿತ ಧ್ಯಾನ ಯೋಗ ಶಿಬಿರ) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ದಿನಾಂಕ: 04.10.2020 ರ ಮದ್ಯಾಹ್ನ 3.30 ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ರವರು ಸಮಾರೋಪಣ ಭಾಷಣ ಮಾಡಲಿರುವರು. ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ಅಸಿಸ್ಟೆಂಟ್ ಗವರ್ನರ್ ರೋ. ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಅನೇಕಾನೇಕ ವೈದ್ಯಕೀಯ ಚಿಕಿತ್ಸೆಯಿಂದ ಗುಣಪಡಿಸಲಾಗದಂತ ರೋಗಗಳನ್ನು ತಡೆಗಟ್ಟುವಂತಹ ಶಕ್ತಿ ಪ್ರಾಣಾಯಾಮಕ್ಕೆ ಇರುವುದು ನಮಗೆಲ್ಲರಿಗೂ ಗೊತ್ತಿರುವಂತಹ ವಿಚಾರ...ಈ ನಮ್ಮ ಈಗಿನ ಜೀವನ ಹೇಗೆಂದರೆ ಮಾನಸಿಕ ಒತ್ತಡ ಹಾಗೂ ಅನೇಕ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದೇವೆ, ಇದಕ್ಕೆಲ್ಲ ಅತ್ಯುತ್ತಮ ಅನುಕೂಲಕರವಾದ ಉಚಿತ ಧ್ಯಾನ-ಯೋಗ ಶಿಬಿರದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಂಡ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ರವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ ಎಂದು ರಿಜಿಸ್ಟ್ರಾರ್ ರಾಜೇಶ್ ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.