ಮಂಗಳೂರು, ಮಾರ್ಚ್ 1 (ಕರ್ನಾಟಕ ವಾರ್ತೆ):- ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಪ್ರಸ್ತುತ ಸಾಲಿನಲ್ಲಿ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಹಿಂದಿ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ , ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ದೂ. ಸಂಖ್ಯೆ: 0824-2287276 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.