ಮಂಗಳೂರು (ಸೆಪ್ಟೆಂಬರ್ 28):- ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮಿತಿಗೆ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಸಮುದಾಯಗಳಿಂದ) ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಂದ ಪ್ರತಿನಿಧಿಗಳನ್ನು ನಾಮನಿರ್ದೇಶನ ಮಾಡಬೇಕಾಗಿರುತ್ತದೆ.
ಆಸಕ್ತ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ವ್ಯಕ್ತಿಗಳು ತಮ್ಮ ಭಾವ ಚಿತ್ರವಿರುವ ವೈಯಕ್ತಿಕ ವಿವರಗಳನ್ನು ಕಚೇರಿಯ ಇ ಮೇಲ್ ವಿಳಾಸ dkminorityofficer@gmail.com ಗೆ ಅಕ್ಟೋಬರ್ 6 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ದೂ. ಸಂಖ್ಯೆ 0824-2211078 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.