ಮಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ತಾಲೂಕಿನ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ : ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ,  ರೂ. 1 ಲಕ್ಷ.

www.backwardclasses.kar.nic.in ಅಥವಾ http/karepass.cgg.gov.in ಈ ವೆಬ್‍ಸೈಟ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 20. ವಿದ್ಯಾರ್ಥಿ ಸಲ್ಲಿಸುವ ಅರ್ಜಿಯನ್ನು, ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ದಾಖಲೆಗಳನ್ನು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉರ್ವಸ್ಟೋರ್, ರೇಡಿಯೋ ಪಾರ್ಕ್, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಎಂದು ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.