ಮಂಗಳೂರು (ಸೆಪ್ಟೆಂಬರ್ 02):- ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಅಧೀನದಲ್ಲಿ ಬರುವ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಎಂ.ಬಿ.ಬಿಎಸ್. ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಸೆಪ್ಟೆಂಬರ್ 5 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಮಂಗಳೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಹುದ್ದೆಯ ವಿವರ ಇಂತಿವೆ ;- ಎಂಬಿಬಿಎಸ್ ವೈದ್ಯರು – 5 ಹುದ್ದೆಗಳು, ವಿದ್ಯಾರ್ಹತೆ ; ಒಃಃS ಸರಕಾರ ದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹಾಗೂ ಹೌಸ್‍ಮೆನ್‍ಶಿಪ್ ಆಗಿರಬೇಕು, ಹುದ್ದೆಗಳ ವರ್ಗೀಕರಣ ; ಸಾಮಾನ್ಯ ಅರ್ಹತೆ - 2 ಪ್ರವರ್ಗ 2 ಬಿ- 1, ಪ್ರವರ್ಗ- II (ಎ)- 1, ಪ..ಜಾತಿ-1, ಮಾಸಿಕ ವೇತನ - ರೂ. 60,000.
ವಯೋಮಿತಿ :- 2020ನೇ ಸೆಪ್ಟೆಂಬರ್ 05 ರಂದು ಸಾ.ವರ್ಗ- 35 ವರ್ಷ, ಇತರ ಹಿಂದುಳಿದ ವರ್ಗಗಳಿಗೆ 38 ವರ್ಷ, ಪ.ಜಾ./ಪ.ಪಂ ಅಭ್ಯರ್ಥಿಗಳು 40 ವರ್ಷ ವಯೋಮಿತಿ ಮೀರಿರಬಾರದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ದ.ಕ. ಮಂಗಳೂರು ಕಚೇರಿಯಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಅಥವಾ ದೂರವಾಣಿ ಸಂಖ್ಯೆ ; 0824-2423672 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.