ಮಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಸದನದಲ್ಲಿ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚಿಸಲು .ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಸಿದ್ದರಾಮಯ್ಯ ರವರ ಅಧಿಕೃತ ನಿವಾಸದಲ್ಲಿ ಹಿರಿಯ ಶಾಸಕರ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಎಸ್.ಆರ್. ಪಾಟೀಲ್, ರಮೇಶ್ ಕುಮಾರ್, ರಾಮಲಿಂಗಾರೆಡ್ಡಿ, ಐವನ್ ಡಿ'ಸೋಜಾ ಸೇರಿದಂತೆ ಸದನದ ಹಲವು ಶಾಸಕರು ಭಾಗವಹಿಸಿದ್ದರು.