ಮಂಗಳೂರು ಜೂನ್ 04:- ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಸಂಗ್ರಹಿಸಿರುವ ಮಿಡತೆ ಜಾತಿಗಳನ್ನು ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರಿಸರ್ಚ್ ಇನ್ಸ್‍ಟಿಟ್ಯೂಟ್(CPCRI, Kasargod), ನ್ಯಾಷನಲ್ ಬ್ಯುರೋ ಆಫ್ ಅಗ್ರಿಕಲ್ಚರ್ ಇನ್‍ಸೆಕ್ಟ್ ರಿಸೋರ್ಸ್‍ಸ್, ಬೆಂಗಳೂರು(NBAIR) ಹಾಗೂ ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರಿಗೆ(GKVK) ಕಳುಹಿಸಳಾಗಿತ್ತು. ಕೀಟ ಶಾಸ್ತ್ರಜ್ಞರಿಂದ ಬಂದಿರುವ ವರದಿಯ ಪ್ರಕಾರ ಕೀಟವು ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ (Aularches miliaris miliaris )ಸ್ಪಾಟೆಡ್ ಕಾಫಿ ಮಿಡತೆ (spotted coffee grasshopper) ಎಂದು ಗುರುತಿಸಲ್ಪಟ್ಟಿದೆ.
ಈ ಮಿಡತೆಗಳು ದಕ್ಷಿಣ ಭಾರತದ ಪಶ್ಚಿಮಘಟ್ಟಗಳಲ್ಲಿ ಕಾಣಿಸಿಕೊಳ್ಳುತ್ತವೆ ಹಾಗೂ ಅಳವಿನಂಚಿನಲ್ಲಿರುವ ಕೀಟವಾಗಿರುತ್ತದೆ (ಇಂಟರ್ ನ್ಯಾಷನಲ್ ಯುನಿಯನ್ ಫಾರ್ ಕನ್ಸರ್‍ವೇಷನ್ ಆಪ್ ನೇಚರ್). ಈ ಮಿಡತೆ  ಕಾಫಿ, ಬಾಳೆ, ಗೇರು, ಅಡಿಕೆ, ತೆಂಗು, ಏಲಕ್ಕಿ ಹಾಗೂ ಭತ್ತದ ಬೆಳೆಯ ಮೇಲೆ ಕಾಣಿಸುವ ಸಾಧ್ಯತೆಗಳಿದ್ದು, ಇವುಗಳು ಯಾವುದೇ ಅಪಾಯಕಾರಿಯಾಗಿರುವುದಿಲ್ಲ. ಭೂಮಿಯ ಉಳುಮೆಯಿಂದ ಇವುಗಳು ಮೊಟ್ಟೆ ಹಂತದಲ್ಲಿ ನಿರ್ವಹಣೆ ಮಾಡಬಹುದಾಗಿರುತ್ತದೆ. ಮರಿ ಮಿಡತೆಗಳನ್ನು ಹಿಡಿದು ಬೇರೆಡೆಗೆ ಬಿಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ನಿರ್ವಹಣೆಯನ್ನು ಎಚ್ಚರಿಕೆಯಿಂದ ಮಾಡಬೇಕಾಗಿದೆ. ಕೀಟಬಾಧೆಯಿಂದ ಬೆಳೆ ನಾಶವಾದ ಸಂದರ್ಭದಲ್ಲಿ ಬೇವಿನ ಮೂಲದ ಕೀಟನಾಶಕಗಳನ್ನು ಅಥವಾ ಲ್ಯಾಂಬ್ಡಾ ಸೈಹಾಲೋಥ್ರಿನ್ 5 ಇಸಿ 1.5 ಮಿ.ಲೀ. ಪ್ರತಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ಸಂರಕ್ಷಣೆ ಅವಶ್ಯವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.