ಮಂಗಳೂರು (ಸೆಪ್ಟೆಂಬರ್ 10):- 2020-21ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಪ್ರೋತ್ಸಾಹ ನೀಡುವ ಉದ್ದೇಶದಿಂದ ಅವರನ್ನು ಗುರುತಿಸಿ ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡುವ ಸಲುವಾಗಿ ಅರ್ಹ ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ. ಕರ್ನಾಟಕ ನಿವಾಸಿಗಳಲ್ಲದ ಹಾಗೂ ರಾಜ್ಯದ ಕ್ರೀಡಾ ಕೇತ್ರಕ್ಕೆ ತೊಡಗಿಸದೇ ಇರುವ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ.
ಅರ್ಜಿ ಸಲ್ಲಿಸಲಿಚ್ಚಿಸುವ ಕ್ರೀಡಾ ಪೋಷಕರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಕಚೇರಿಯಿಂದ ಪಡೆದುಕೊಂಡು ಭರ್ತಿಮಾಡಿ ದಾಖಲೆಗಳೊಂದಿಗೆ ಸೆಪ್ಟೆಂಬರ್ 15 ರೊಳಗೆ ಮಂಗಳಾ ಕ್ರೀಡಾಂಗಣ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0824-2451264 ಸಂಪರ್ಕಿಸುವಂತೆ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.