ಮಂಗಳೂರು:- ಕರ್ನಾಟಕ ರಾಜ್ಯದ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ರಾಜ್ಯದ ಅರ್ಹ ಕ್ರೀಡಾಪಟುಗಳು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾ ಸಿಂಧು ವೆಬ್‍ಸೈಟ್ http://serviceonline.gov.in/karnataka ದಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಜುಲೈ 10 ರೊಳಗೆ ಸಲ್ಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.