ಮಂಗಳೂರು: ಕರ್ನಾಟಕ ಸರಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವಸ್ಪಂದನ ಕೇಂದ್ರ, ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರ  ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ 20-12-2019 ಅಪರಾಹ್ನ 2.30 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಉದ್ಘಾಟಿಸಲಿದ್ದಾರೆ.

ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ  ಕ್ಷಮಾ ಎನ್. ರಾವ್  ಅಧ್ಯಕ್ಷತೆಯನ್ನು ವಹಿಸಿಲಿದ್ದಾರೆ. ಯುವಸ್ಪಂದನ ಕೇಂದ್ರದ  ಡೊಂಬಯ್ಯ ಇಡ್ಕಿದು, ಯುವಸಮಾಲೋಚಕ ಆದರ್ಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಎನ್ ಎಸ್  ಎಸ್  ಕಾಲೇಜಿನ ಕಾರ್ಯಕ್ರಮ ಅಧಿಕಾರಿ ಬಾಲಚಂದ್ರ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.