ಮಂಗಳೂರು ಜೂನ್ 25: ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆ ಹಾಗೂ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿದ್ದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ 5 ಮಂದಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್-19 ಸೊಂಕು ಕಾಣಿಸಿಕೊಂಡಿರುವುದು ಧೃಢವಾಗಿದೆ.
ಇವರೆಲ್ಲರಿಗೂ ನಿಗದಿಪಡಿಸಿದ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ.
ಇವರೆಲ್ಲರ ಪ್ರಾಥಮಿಕ ಸಂಪರ್ಕಿತರನ್ನು ಈಗಾಗಲೇ ಪತ್ತೆ ಹಚ್ಚಲಾಗಿದ್ದು ಸರಕಾರದ ಮಾರ್ಗಸೂಚಿಯ ಪ್ರಕಾರ ಅವರೆಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. ಇವರು ಕೆಲಸ ನಿರ್ವಹಿಸುತ್ತಿದ್ದ ಪ್ರದೇಶವನ್ನೂ ಸ್ಯಾನಿಟೈಸ್ ಮಾಡಲಾಗಿದೆ.