ಮಂಗಳೂರು: ದಿನಾಂಕ 02.01.2020 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಂಗಳೂರು ಕುದ್ಮುಲ್ ರಂಗರಾವ್(ಟೌನ್ ಹಾಲ್) ಮುಂಭಾಗದಲ್ಲಿ "ಕೇಂದ್ರ ಸರ್ಕಾರದ ಎನ್.ಆರ್.ಸಿ, ಸಿ.ಎ.ಎ ಕಾನೂನಿನ ವಿರುದ್ಧ ಮತ್ತು ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನ್ನು ಖಂಡಿಸಿ, ಜಾತ್ಯಾತೀತ ಪಕ್ಷಗಳು ಮತ್ತು ಸಂಘಟನೆಗಳ ವತಿಯಿಂದ ಜಂಟಿ ಪ್ರತಿಭಟನಾ ಸಭೆ"ಯು ನಡೆಯಿತು
ಈ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಮ.ನ.ಪಾ ಸದಸ್ಯರು ಹಾಗೂ ಪಕ್ಷದ ಮುಖಂಡರು, ನಾಯಕರುಗಳು ಹಾಗೂ ಕಾರ್ಯಕರ್ತರುಗಳು ಕ್ಲಪ್ತ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.