ಮಂಗಳೂರು: ಸರಕಾರಿ ಆದೇಶದಂತೆ ಜಿಲ್ಲಾಧಿಕಾರಿಗಳು, ದ.ಕ ಜಿಲ್ಲೆ, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಮಂಗಳೂರು ಇಲ್ಲಿ ಡಿಸೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಡಿಸೆಂಬರ್ 26ರ ಒಳಗಾಗಿ ಲಿಖಿತವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0824-2214021 ನ್ನು ಸಂಪರ್ಕಿಸಬೇಕು ಎಂದು ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ತಿಳಿಸಿದ್ದಾರೆ.