ಮಂಗಳೂರು,(ಮಾರ್ಚ್ 06):- ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ  ಇದರ ಸಂಯುಕ್ತ ಆಶ್ರಯದಲ್ಲಿ  ಮಹಿಳಾ ದಿನಾಚರಣೆಯ  ಅಂಗವಾಗಿ ಮಾರ್ಚ್ 8 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮೇರಿಹಿಲ್‍ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ,  ಕಚೇರಿಯಲ್ಲಿ ಮಹಿಳಾ ದಿನಾಚರಣಾ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ  ನಿವೃತ್ತ ಪ್ರೋಫೆಸರ್ ಎಮ್.ಎಲ್.ಸುರೇಶ್‍ನಾಥ್ ಭಾಗವಹಿಸಲಿದ್ದಾರೆ. ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ರವರು ಅಧ್ಯಕ್ಷತೆ ವಹಿಸಲಿದ್ದಾರೆ.