ಮಂಗಳೂರು (ನವೆಂಬರ್ 7): ಪುತ್ತೂರು ಅರಿಯಡ್ಕ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಯನ್ನು ಭರ್ತಿ ಮಾಡಲು ಎಸ್.ಎಸ್.ಎಲ್.ಸಿ  ಪಾಸಾದ ಅದೇ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

     ಮೇಲ್ವಿಚಾರಕರ ಸ್ಥಾನವು ಮಹಿಳಾ ಅಭ್ಯರ್ಥಿಗೆ ಮೀಸಲಾಗಿದ್ದು, ಭರ್ತಿ ಮಾಡಿದ ಅರ್ಜಿಯ ಜೊತೆ ಇನ್ನಿತರ ದೃಢೀಕೃತ ದಾಖಲೆಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಡಿಸೆಂಬರ್ 7ರೊಳಗೆ ಸಲ್ಲಿಸಬೇಕು.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ಅಥವಾ ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯದ  ದೂ.ಸಂ:0824-2441905  ಸಂಪರ್ಕಿಸುವಂತೆ ಮುಖ್ಯ ಗ್ರಂಥಾಲಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಎಣ್ಣೆ ತಾಳೆಯ ವ್ಯವಸಾಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ಮಂಗಳೂರು ನವೆಂಬರ್ 7 (ಕರ್ನಾಟಕ ವಾರ್ತೆ):. ತೋಟಗಾರಿಕೆ ಇಲಾಖೆ ವತಿಯಿಂದ ತಾಳೆ ಬೆಳೆ ಹೊಸ ಪ್ರದೇಶದ ವಿಸ್ತರಣೆ ರೈತರಿಗೆ ಸಹಾಯಧನ ನೀಡಲಾಗುವುದು ಆಸಕ್ತ ರೈತರು ತಮ್ಮ ಜಮೀನಿನ ಪಹಣಿ ಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ.

     ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು – ಮೊ.ಸಂ-8277806378, (0824-2423615) ಅಥವಾ ತಾಲೂಕು ಮಟ್ಟದ ತೋಟಗಾರಿಕೆ ಇಲಾಖೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ ಮೊ.ಸಂ- 8277806371 (08255-234102), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು ಮೊ.ಸಂ– 9731854527 (08251-230905), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ  ಮೊ.ಸಂ    – 9880993238 (08257-232020), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ  ಮೊ.ಸಂ – 8277806380 (08256-232148)ಯನ್ನು ಸಂಪರ್ಕಿಸುವಂತೆ ಮಂಗಳೂರು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.