ಮಂಗಳೂರು ಮಾರ್ಚ್ 05 (ಕರ್ನಾಟಕ ವಾರ್ತೆ):- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇವರ ದ.ಕ ಜಿಲ್ಲಾ ಪ್ರವಾಸ ಇಂತಿವೆ:

     ಮಾರ್ಚ್ 8 ರಂದು ಮಧ್ಯಾಹ್ನ 2.30 ಗಂಟೆಗೆ ಮಂಗಳೂರಿಗೆ ಆಗಮಿಸಿ, ಪುರಭವನದಲ್ಲಿ ಆಯೋಜಿಸಿರುವ 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ 8.40 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಕೇಂದ್ರಸ್ಥಾನ ಬೆಂಗಳೂರಿಗೆ ತೆರಳುವರು.