ಮಂಗಳೂರು,(ಮಾರ್ಚ್ 6):- ಜಿಲ್ಲಾ ಕಾನಾನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ತಿದ್ದುಪಡಿ 2016 ರಡಿ ಜಾಗೃತಿ ರಥ ಉದ್ಘಾಟನೆ ಹಾಗೂ ಕಾನೂನು ಅರಿವು ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಮಾರ್ಚ್ 9 ರಂದು ಬೆಳಿಗ್ಗೆ 10.30 ಕ್ಕೆ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ. ಎ. ಜಿ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಎಂ. ಲಕ್ಷ್ಮೀ ಪ್ರಸಾದ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪಾ, ಸಹಾಯಕ ಕಾರ್ಮಿಕ ಆಯುಕ್ತ ಕೆ. ಬಿ. ನಾಗರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಲ್ಲೆ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪ ಬೋವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಎಸ್. ಬಿ. ಯೋಗೀಶ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ವಿಲ್ಮಾ ಎಲಿಜಬೆತ್ ತಾವ್ರೋ, ಅಮರೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ಪಡಿ, ಚೈಲ್ಡ್ ಲೈನ್ ಮತ್ತು ರಾಜ್ಯ ಸಂಚಾಲಕರು ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನಾ ನಿರ್ದೇಶಕ ರೆನ್ನಿ ಡಿ’ಸೋಜಾ, ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕ ಹಿಲ್ಡಾರಾಯಪ್ಪನ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಶ್ರೀನಿವಾಸ. ಒ ಭಾಗವಹಿಸಲಿದ್ದಾರೆ.