ಮಂಗಳೂರು (ಸೆಪ್ಟೆಂಬರ್ 24):- ಕರ್ನಾಟಕ ಜಾನಪದ ಅಕಾಡೆಮಿಯು 2019 ಜನವರಿ 1 ರಿಂದ ರಿಂದ ಡಿಸೆಂಬರ್ 31ರ ವರೆಗೆ ಪ್ರಥಮ ಆವೃತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ: ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

     ಲೇಖಕರು, ಪ್ರಕಾಶಕರು, ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು – 560002 ಇವರಿಗೆ ಅಕ್ಟೋಬರ್ 25 ರೊಳಗೆ ಖುದ್ದಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಕೃತಿಗಳನ್ನು ಕಳುಹಿಸಿಕೊಡಬೇಕು.

    ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ತುಳು ಭವನ, ಉರ್ವಸ್ಟೋರ್, ಅಶೋಕ ನಗರ ಅಂಚೆ, ಮಂಗಳೂರು ಹಾಗೂ ದೂರವಾಣಿ ಸಂಖ್ಯೆ 0824-2951327 ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.