ಮಂಗಳೂರು,(ಮಾರ್ಚ್ 1):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ ಇವರ ಸಹಯೋಗದೊಂದಿಗೆ ಪ್ರಸ್ತುತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರಿಗೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾರ್ಚ್ 6 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳ ಕ್ರೀಡಾಂಗಣದಲ್ಲಿ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ.

      ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ ಕಚೇರಿಯ ದೂರವಾಣಿ ಸಂಖ್ಯೆ: 0824-2451264 ಹಾಗೂ ನೋಡಲ್ ಅಧಿಕಾರಿ ವಿನೋದ್‍ಕುಮಾರ್ ಇವರ ಮೊ. ಸಂಖ್ಯೆ: 9845026869 ಗೆ ಸಂರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.