ಮಂಗಳೂರು,(ಮಾರ್ಚ್ 16):- ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಕೌಶಲ್ಯ ಸಭಾ ಸಮಿತಿ ಸಭೆಯು ಮಾರ್ಚ್ 6 ರಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಕೌಶಲ್ಯಾಭಿವೃದ್ಧಿ, ತರಬೇತಿ, ಉದ್ಯೋಗವಕಾಶಗಳಿಗಾಗಿ ಉದ್ಯಮದ ಸಹಭಾಗಿತ್ವಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳನ್ನು ಚರ್ಚಿಸಲಾಯಿತು.
ವಿದೇಶಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅಧಿಕೃತ ಮಾಹಿತಿ, ಮಾರ್ಗದರ್ಶನ, ತರಬೇತಿ ಮತ್ತು ನೇಮಕಾತಿಯನ್ನು ಒದಗಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯು ಕರ್ನಾಟಕದ ಮೊದಲ ಅಂತರಾಷ್ಟ್ರೀಯ ವಲಸೆ ಕೇಂದ್ರಗಳಲ್ಲಿ ಒಂದಾಗಿದ್ದು, Iಒಅ-ಏ ಕೇಂದ್ರವನ್ನು ಜಿಲ್ಲಾ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವಿಭಾಗದಲ್ಲಿ ಆಯೋಜಿಸಿಲಾಗಿದೆ. ಅಭ್ಯರ್ಥಿಗಳು ಮಾಹಿತಿಗಾಗಿ ಉಚಿತ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು (080-29753007). ಜಿಲ್ಲಾ ಕೌಶಲ್ಯಾಭಿವೃದ್ಧಿ ಯೋಜನೆಯ ಬಗ್ಗೆ ಇಂಡಿಯಾ ಶ್ರೀಕಾಂತ್ ಪಂಚಗಾವಿ ಅವರು ಸಭೆಗೆ ಮಾಹಿತಿಯನ್ನು ನೀಡಿದರು.
ಕೌಶಲ್ಯಾಭಿವೃದ್ಧಿ ಇಲಾಖೆಯು ತರಬೇತಿ ಮತ್ತು ನಿಯೋಜನೆ ಅವಕಾಶಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್‍ನಂತಹ ಉದ್ಯಮಶೀಲ ಸಂಘಟನೆಗಳೊಂದಿಗೆ ಸಹಭಾಗಿತ್ವ ವಹಿಸಲಿದೆ. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪ ಪ್ರಾಂಶುಪಾಲರು ಕೇಳಿದ ಪ್ರಶ್ನೆಗಳಿಗೆ ಉತ್ತರವಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಯವರು PಒSಒಙ ಹಾಗೂ ಇತರ ಕಲ್ಯಾಣ ಯೋಜನೆಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಾರಾನಾಥ್ ಕೆ.ವಿ., ಸಿಡಾಕ್‍ನ ಜಂಟಿ ನಿರ್ದೇಶಕ ಅರವಿಂದ ಡಿ ಬಾಳೇರಿ, ರುಡ್‍ಸೆಟ್‍ನ ನಿರ್ದೇಶಕ ಪಡದಯ್ಯ ಸಿ ಹಿರೇಮಠ, ಕೆನರಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಐಸಾಕ್ ವಾಸ್ , ಜಿಲ್ಲಾ ಉದ್ಯೋಗಾಧಿಕಾರಿಯಾದ ಶೈಲಜಾ ಕೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.