ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸೂಚನೆಯಿದ್ದು, ದಿನಾಂಕ 20-07-2019 ರಿಂದ 22-07-2019 ವರೆಗೆ ಪ್ರತಿದಿನ ತಲಾ 200mm ಮೇಲ್ಪಟ್ಟು ಮಳೆಯಾಗುವ ಸಾಧ್ಯತೆಯಿದೆ. (ರೆಡ್ ಅಲರ್ಟ್ ಘೋಷಣೆ) ಆಗಿರುವ ಹಿನ್ನಲೆ ಚಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕಾಗಿರುತ್ತದೆ, ಅದರಂತ, 1, ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ).

ದಿನಾಂಕ 20-07-2019 ರಂದು ರಜೆ ಘೋಷಿಸಲಾಗಿದೆ. 2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು. 3, ಮೀನುಗಾರರಿಗೆ ಮೇಲಿನ ದಿನಾಂಕದಂದು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನ

ನೀಡಿದೆ. 4, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು. 5, ಪ್ರವಾಸಿಗರು ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆವಹಿಸುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸುವುದು.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಮ್ - 1077 Whatapp no : 9483908000