ಮಂಗಳೂರು (ಸೆಪ್ಟೆಂಬರ್ 24):- 2020-21ನೇ ಸಾಲಿನಲ್ಲಿ ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ 2 ವರ್ಷಗಳ ಐಟಿಐ, ದ್ವಿತೀಯ ಪಿಯುಸಿ (ವಿಜ್ಞಾನ), ದ್ವಿತೀಯ ಪಿಯುಸಿ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಆನ್ ಲೈನ್ ನಾನ್ ಇಂಟರಾಕ್ಟೀವ್ ಕೌನ್ಸಲಿಂಗ್(Online Option Entry) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

     ಪ್ರವೇಶ ಬಯಸುವ ಅಭ್ಯರ್ಥಿಗಳು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್   https://dtek.karnataka.gov.in,   https://dtetech.karnataka.gov.in/kartechnical ಗಳ ಮೂಲಕ ಪ್ರಚುರಪಡಿಸುವ ಪ್ರವೇಶ ಅಧಿಸೂಚನೆಗಳನ್ವಯ  ತಮಗೆ ಹತ್ತಿರದ ಸರ್ಕಾರಿ/ಅನುದಾನಿತ ಪಾಲಿಟೆಕ್ನಿಕ್‍ಗಳ ಸಹಾಯ ಕೇಂದ್ರಗಳಲ್ಲಿ ತಮ್ಮ ಇಚ್ಛೆಯ ಅನುಸಾರ ಪಾಲಿಟೆಕ್ನಿಕ್ / ಕೋರ್ಸ್‍ಗಳನ್ನು ಆಯ್ಕೆ ಮಾಡಿ ಆದ್ಯತಾ ಕ್ರಮಾನುಸಾರ ಗರಿಷ್ಟ ಸಂಖ್ಯೆಯ ಆಪ್ಷನ್ ಎಂಟ್ರಿಯನ್ನು ಆನ್‍ಲೈನ್‍ನಲ್ಲಿ ದಾಖಲಿಸಲು  ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 6 ರಂದು ಸಂಜೆ 5.30 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

     ಅಭ್ಯರ್ಥಿಗಳು ಅರ್ಜಿಯೊಂದಿಗೆ ವಿವಿಧ ಪ್ರವರ್ಗಗಳ ಮೀಸಲಾತಿಯಡಿ ಸಂಬಂಧಪಟ್ಟ ದೃಢೀಕೃತ ದಾಖಲೆಗಳನ್ನು ಅಪ್‍ಲೋಡ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸುವ ಪಾಲಿಟೆಕ್ನಿಕ್‍ಗಳಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.  ಡಿಪ್ಲೊಮಾ ಪ್ರವೇಶ ಪ್ರಕ್ರಿಯೆಯ ಅಧಿಸೂಚನೆ ಮತ್ತು ವೇಳಾಪಟ್ಟಿಯನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಿಂದ ಪಡೆಯಬಹುದು.  

     ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು, ಹಾಗೂ ದೂರವಾಣಿ ಸಂಖ್ಯೆ: 0824-2211636 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.