ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಮತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 21ರಂದು ಶನಿವಾರ ಬೆಳಗ್ಗೆ 10:00 ಗಂಟೆಗೆ ನಗರದ ಲೇಡಿಹೀಲ್ ವೃತ್ತದ ಬಳಿ ನಡೆಯಲಿದೆ.ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕ್ಕಳನ್, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್ ತೋಟಗಾರಿಕ ಉಪನಿರ್ದೆಶಕ ಎಚ್. ಆರ್. ನಾಯ್ಕ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.