ಮಂಗಳೂರು,( ಜು 28 ):- ದಿಡೀರ್ ಬೆಳವಣಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಜೇಂದ್ರ ಕೆ.ವಿ ಅವರು ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.ಡಾ. ರಾಜೇಂದ್ರ ಕೆ.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ.
ಡಾ. ರಾಜೇಂದ್ರ ಕೆ.ವಿ ಅವರು 2013 ಕರ್ನಾಟಕ ಕೆಡೆರ್ ನ ಐಎಸ್ ಅಧಿಕಾರಿಯಾಗಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ಮೂಲದವರಾಗಿರುವ ಇವರು ವೈದ್ಯರಾಗಿದ್ದರು. ನಂತರ ನಾಗರಿಕ ಸೇವೆ ಆಸಕ್ತಿಯಿಂದ ಐಎಎಸ್ ಪರೀಕ್ಷೆ ಬರೆದ ಇವರು ದೇಶದಲ್ಲಿ 32 ನೇ ರ್ಯಾಂಕ್ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದರು.