ಮಂಗಳೂರು (ಸೆಪ್ಟೆಂಬರ್ 21):- ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಮೂಡಬಿದ್ರೆ ಪುರಸಭೆ ಮತ್ತು ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ಥಳೀಯ ಸಂಸ್ಥೆಗಳ ವಿವರ ಇಂತಿವೆ: ಕೋಟೆಕಾರ್ ಪಟ್ಟಣ ಪಂಚಾಯತ್, ಹುದ್ದೆಯ ವಿವರ - 1, ಉಳ್ಳಾಲ ನಗರ ಸಭೆ - 3, ಮೂಡಬಿದ್ರೆ ಪುರಸಭೆ - 1, ಬಂಟ್ವಾಳ ಪುರಸಭೆ – 1.
ಅರ್ಹತೆ: ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45 ವರ್ಷದ ಆರೋಗ್ಯವಂತರಾಗಿರಬೇಕು. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಉತ್ತೀರ್ಣ/ಅನುತ್ತೀರ್ಣರಾಗಿರಬೇಕು. ಅಂಗವಿಕಲರಾಗಿರಬೇಕು, ಭಾಗಶಃ ಅಂಧರಿಗೆ/ ಭಾಗಶಃ ಶ್ರವಣದೋಷವುಳ್ಳವರಿಗೆ (ಮೈಲ್ಡ್ ಮತ್ತು ಮಾಡರೇಟ್) ಮತ್ತು ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸುವುದು. ಅಂಗವಿಕಲತೆಯು ಶೇ. 40 ರಷ್ಟಿರಬೇಕು. ಅಂಗವಿಕಲತೆಯ ಬಗ್ಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರ, ಗುರುತಿನ ಚೀಟಿಯ ದಾಖಲೆ ಒದಗಿಸಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನ. ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು -575006 ಈ ಕಛೇರಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಹಾಗೂ ದೂರವಾಣಿ ಸಂಖ್ಯೆ: 0824-248173, 2455999 ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಯಮುನಾ ಡಿ. ಅವರ ಪ್ರಕಟಣೆ ತಿಳಿಸಿದೆ.