ಮಂಗಳೂರು (ನವೆಂಬರ್ 3):- ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳಿದ್ದು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ನವೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು -575006, ದೂ.ಸಂ 0824-248173, 2455999 ಈ ಕಛೇರಿಯನ್ನು ಸಂಪರ್ಕಿಸುವoತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.