ಮಂಗಳೂರು,(ಜನವರಿ 29):- ಪ್ರಸ್ತುತ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಹಿಂದಿನ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ/ಅಂತರಾಜ್ಯ/ ಅಂತರ-ವಿಶ್ವವಿದ್ಯಾಲಯ/ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ದಾಖಲಿಸಿರುವ ಪ್ರತಿಭಾವಂತ ಕ್ರೀಡಾಪಟುಗಳಿಗೆ (ವಿಕಲಚೇತನ ಕ್ರೀಡಾಪಟುಗಳು ಸೇರಿದಂತೆ) ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕ್ರೀಡಾಪಟುಗಳು ತಮ್ಮ ಹಿಂದಿನ ಕ್ಯಾಲೆಂಡರ್ ವರ್ಷದ ಕ್ರೀಡಾ ಸಾಧನೆಗಳೊಂದಿಗೆ ಫೆಬ್ರವರಿ 5 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ ದೂ.ಸಂಖ್ಯೆ: 0824-2451264 ಹಾಗೂ ತಿತಿತಿ.ಚಿಜಥಿssಞ@ಥಿಚಿhoo.ಛಿom  ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.