ಮಂಗಳೂರು (ಸೆಪ್ಟೆಂಬರ್ 14):- ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2020-21ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗಗಳಲ್ಲಿ ಬಿ.ಎ. ಮತ್ತು ಬಿ.ಕಾಂ. ಕೋರ್ಸುಗಳಿಗೆ ಆನ್ಲೈನ್ ಆರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ, ಬ್ಯಾಂಕ್ ಪಾಸ್ ಬುಕ್, ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಪ್ರಮಾಣ ಪತ್ರ - ಎಸ್ಎಸ್ಎಲ್ಸಿ, ಪಿಯುಸಿ, ಅಂಕಪಟ್ಟಿ, ಮಹಿಳಾ ಅಭ್ಯರ್ಥಿಗಳು ಬಿ.ಪಿ.ಎಲ್ ಕಾರ್ಡ್ ಅದರ ಪ್ರತಿಯನ್ನು ಹಾಜರುಪಡಿಸಬೇಕು.
ಅಭ್ಯರ್ಥಿಗಳು ವೆಬ್ಸೈಟ್ www.ksoumysuru.ac.in ನಲ್ಲಿ ಸಲ್ಲಿಸಿ, ಶುಲ್ಕ ಪಾವತಿಸಬಹುದು. ಅಥವಾ ಸದ್ರಿ ಕಲಿಕಾರ್ಥಿ ಕೇಂದ್ರ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಇಲ್ಲಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2491073, 2494109, 9663437451 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.