ಮಂಗಳೂರು :-  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕಳೆದ 11 ವರ್ಷಗಳಿಂದ ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಇದೀಗ ಅಕಾಡೆಮಿ ಕಚೇರಿಯನ್ನು ಮಂಗಳೂರು ತಾಲೂಕು ಪಂಚಾಯತ್‍ನ ಹಳೇ ಕಟ್ಟಡ ಸಾಮಥ್ರ್ಯ ಸೌಧದ ಎರಡನೇ ಮಹಡಿಗೆ  ಸ್ಥಳಾಂತರಗೊಳಿಸಲಾಗಿದೆ.     ಜೂನ್ 15 ರಂದು ಸಂಜೆ 4 ಗಂಟೆಗೆ  ಸ್ಥಳಾಂತರಗೊಂಡ ನೂತನ ಕಚೇರಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ  ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮತ್ತು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಇವರು ಭಾಗವಹಿಸಲಿದ್ದಾರೆ.

     ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಲಿದ್ದಾರೆ, ಅಕಾಡೆಮಿ ಸದಸ್ಯರು ಮತ್ತು ಪತ್ರಿಕಾ ಪ್ರತಿನಿಧಿಗಳ ಸಮ್ಮುಖದಲ್ಲಿ ಕೋರೊನ ಸಾಂಕ್ರಾಮಿಕ ರೋಗದ ಮುಂಜಾಗ್ರತಾ ಕ್ರಮದ ನಿಮಿತ್ತ ಸರಕಾರದ ನಿಯಮಾನುಸಾರ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಈ ಸಮಾರಂಭ ನಡೆಯಲಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಪತ್ರಿಕಾ ಪ್ರಕಟಣೆ ತಿಳಿಸಿದೆ.