ಮಂಗಳೂರು (ಸೆಪ್ಟೆಂಬರ್ 22):- ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೆಪ್ಟೆಂಬರ್ 24, 28 ಮತ್ತು 30 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧ ಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

 ಸೆಪ್ಟೆಂಬರ್ 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡುಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ, ಸೆಪ್ಟೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ,   ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,   ಸೆಪ್ಟೆಂಬರ್ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ,  ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್‍ ಠಾಣೆ, 2ನೇ ಮಹಡಿ, ಮೂಡಾ ಬಿಲ್ಡಿಂಗ್, ಉರ್ವಾಸ್ಟೋರ್,ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು-575006, ದೂರವಾಣಿ ಸಂಖ್ಯೆ: 0824-2483000 ಸಂಪರ್ಕಿಸುವಂತೆ ದ.ಕ. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ ಅವರ ಪ್ರಕಟಣೆ ತಿಳಿಸಿದೆ.