ಮಂಗಳೂರು: ಮಂಗಳೂರಿಗೆ ಇಂದು ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು   ಗೋಲೀಬಾರ್ ನಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಶನಿವಾರ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಳಿಕ ಅವರು  ವಿವಿಧ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅಹವಾಲು ಆಲಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ದ.ಕ. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು,  ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ ಕಾಮತ್, ಬಿ.ಎಂ. ಫಾರೂಕ್, ಐವನ್ ಡಿಸೋಜಾ , ರಾಜೇಶ್ ನಾಯಕ್, ಮಾಜಿ ಶಾಸಕರಾದ ಮೊಹಿದೀನ್ ಬಾವಾ, ಜೆ.ಆರ್. ಲೋಬೋ, ಸೆಂಟ್ರಲ್ ಮುಸ್ಲಿಂ ಕಮಿಟಿ ಅಧ್ಯಕ್ಷ ಮುಹಮ್ಮದ್ ಮಸೂದ್ ಮತ್ತಿತರರು ಇದ್ದರು.