ಮಂಗಳೂರು (ಜುಲೈ 28):- 10-15 ವರ್ಷದೊಳಗಿನ ಮಕ್ಕಳಿಗೆ ಜುಲೈ 25 ರಿಂದ ಡಿಸೆಂಬರ್ 27 ರವರೆಗೆ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಮಧ್ಯಾಹ್ನ 3 ರಿಂದ ಸಂಜೆ 4 ವರೆಗೆ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಮನೆಯಲ್ಲೇ ಮಾಸ್ಕ್ ತಯಾರಿಕೆ, ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಕಥೆ, ಕವನ, ಪ್ರಬಂಧ, ಬರೆಯುವುದು ಮತ್ತು ವಾಚಿಸುವುದು, ನೃತ್ಯ, ಸಂಗೀತ, ನಾಟಕ, ಯೋಗ, ವಿಜ್ಞಾನ, ಆರ್ಗಾನಿಕ್ ಹ್ಯಾಂಡ್ ವಾಷ್ ತಯಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ಆನ್‍ಲೈನ್ ಮುಖಾಂತರ ಉಚಿತವಾಗಿ ಚಟುವಟಿಕೆಗಳನ್ನು ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದೆ.
ಆಸಕ್ತ ಮಕ್ಕಳು ಇಚ್ಚಿಸುವ ಯಾವುದಾದರೂ ಒಂದು ಚಟುವಟಿಕೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಒಂದು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇ-ಮೇಲ್ secy.balbhavan.bng@gmail.com ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು, ದೂರವಾಣಿ ಸಂಖ್ಯೆ 0824-2451254 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.