ಮಂಗಳೂರು:- ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ಕಾರ್ಪೋರೇಟರ್ ಗೂ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಅವರೇ ಸಾಮಾಜಿಕ ತಾಣದಲ್ಲಿ ಈ ಕುರಿತು ಸ್ವತಃ ಮಾಹಿತಿ ನೀಡಿದ್ದಾರೆ.
ಪಾಲಿಕೆ ಸದಸ್ಯೆ ಕೆಲ ದಿನಗಳ ಹಿಂದೆ ಕುಂಜತ್ತಬೈಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಭಾಗಿಯಾಗಿದ್ದು, ಈ ಸಭೆಯಲ್ಲಿ ಭಾಗವಹಿಸಿದ ಒಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರು ತಾವೇ ಕ್ವಾರೆಂಟೈನ್ ಗೆ ಒಳಗಾಗಿದ್ದರು. ಆದರೆ ಇಂದು ಬಂದ ವರದಿಯಲ್ಲಿ ಪಾಲಿಕೆ ಸದಸ್ಯೆಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದೆ.