ಮಂಗಳೂರು (ಸೆಪ್ಟೆಂಬರ್ 10):- ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ  ಇಲಾಖೆಯ ಯೋಜನೆಯಾದ “ಯುವಸ್ಪಂದನ” ದಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

     ಶೈಕ್ಷಣಿಕ ಅರ್ಹತೆ- ಯಾವುದೇ ಪದವಿ ಹಾಗೂ ಮೇಲ್ಪಟ್ಟ  ಪದವೀಧರ ಯುವಕರು ಅವಶ್ಯವಿರುವ ಕೌಶಲ್ಯ, ಸ್ಥಳೀಯ ಭಾಷೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದು, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಉತ್ತಮ ಅಂತರ್‍ವ್ಯಕ್ತಿಯ ಸಂವಹನ ಕೌಶಲ್ಯ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು.

   ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಹಾಗೂ ಯುವಜನ ಸಂಬಂಧಿ ವಿಷಯಗಳ ಕುರಿತು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. 21 ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು.  

     ಅರ್ಜಿಯನ್ನು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಮಂಗಳಾ ಕ್ರೀಡಾಂಗಣ, ಮಂಗಳೂರು ಇವರಿಗೆ  ಸೆಪ್ಟೆಂಬರ್ 21 ರೊಳಗೆ ತಲುಪಿಸಬೇಕು. ಸಂದರ್ಶನದ ದಿನಾಂಕವನ್ನು ದೂರವಾಣಿ ಮೂಲಕ ತಿಳಿಸಲಾಗುವುದು.

        ಹೆಚ್ಚಿನ ಮಾಹಿತಿಗಾಗಿ ಯುವಸ್ಪಂದನದ ಕ್ಷೇತ್ರ ಸಂಪರ್ಕಾಧಿಕಾರಿ ದಿವಾಕರ್,  ದೂರವಾಣಿ ಸಂಖ್ಯೆ-8495826518 ಮತ್ತು ಯುವ ಸಮಾಲೋಚಕ ಆದರ್ಶ ಶೆಟ್ಟಿ ದೂರವಾಣಿ ಸಂಖ್ಯೆ -7259188435 ಸಂಪರ್ಕಿಸುವಂತೆ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.