ಮಂಗಳೂರು,(ಜನವರಿ 4):- ಜಿಲ್ಲಾ ಆಯುಷ್ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ವೆಲ್‍ನೆಸ್ ಸೆಂಟರುಗಳಾದ ಮಂಗಳೂರು ತಾಲೂಕಿನ ಸರ್ಕಾರಿ ಯುನಾನಿ ಚಿಕಿತ್ಸಾಲಯ, ಕಸ್ಬಾ ಬೆಂಗ್ರೆ, ಸರ್ಕಾರಿ ಯುನಾನಿ ಚಿಕಿತ್ಸಾಲಯ-ಕೆರೆಕಾಡು, ಮತ್ತು ಬೆಳ್ತಂಗಡಿ ತಾಲೂಕಿನ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ-ತಣ್ಣೀರುಪಂಥ, ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ಹುದ್ದೆಗೆ ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ..
ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 60 ವರ್ಷಗಳ ಒಳಗಿರಬೇಕು. ಸ್ಥಳೀಯರಿಗೆ ಪಾಶಸ್ತ್ಯವನ್ನು ನೀಡಲಾಗುವುದು.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ದೂ.ಸಂ. 0824-2453063 ಹಾಗೂ ಜಿಲ್ಲಾ ಆಯುಷ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.