ಮಂಗಳೂರು :- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ವತಿಯಿಂದ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮತ್ತು ಅವರ ಕುಟುಂಬದ ಅವಲಂಬಿತರಿಗಾಗಿ ಸ್ವಯಂ ಉದ್ಯೋಗ ಯೋಜನೆ, ಸಮೃದ್ಧಿ ಯೋಜನೆ, ಉನ್ನತಿ ಯೋಜನೆ, ಐರಾವತ ಯೋಜನೆ, ಪ್ರೇರಣಾ ಯೋಜನೆ, ಸ್ಪೂರ್ತಿ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ 2019-20ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿ.ಹೆಚ್.ಎಸ್ ರಸ್ತೆ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಹಂಪನಕಟ್ಟೆ, ಮಂಗಳೂರು, ಆಥವಾ ದೂರವಾಣಿ ಸಂಖ್ಯೆ: 0824-2420114 ನ್ನು ಸಂಪರ್ಕಿಬಹುದು ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.