ಮಂಗಳೂರು (ಅಕ್ಟೋಬರ್ 15):- ಭಾರತ ಸರ್ಕಾರದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಎಸ್. ಕುಂದರ್ ಅವರು ಅಕ್ಟೋಬರ್ 22 ಮತ್ತು 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಕ್ಟೋೀಬರ್ 22 ರಂದು ಬೆಳಿಗ್ಗೆ 11.30 ಕ್ಕೆ ಮಂಗಳೂರಿನಲ್ಲಿ ದ.ಕ ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಲಿದ್ದಾರೆ. ಅಕ್ಟೋಬರ್ 23 ರಂದು ಬೆಳಿಗ್ಗೆ 10 ಕ್ಕೆ ಮಂಗಳೂರಿನಿಂದ ಉಡುಪಿಗೆ ತೆರಳುವರು.