ಮಂಗಳೂರು : 2019-20ನೇ ಸಾಲಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ  ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್-ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ವೆಬ್‍ಸೈಟ್ www.karepass.cgg.gov.in ಅಥವಾ  www.backwardclasses.kar.nic.in ಮೂಲಕ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 8050770005, 8050770004 ಸಂಪರ್ಕಿಸಬೇಕು ಎಂದು ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಿಳಿಸಿದೆ.