ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಶುಕ್ರವಾರ (ಜೂನ್‌ 12) ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರೆಡ್‌ಕ್ರಾಸ್‌ ಮತ್ತು ಎನ್‌ಎಸ್‌ಎಸ್‌ ವಿಭಾಗಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಉದಯಕುಮಾರ್‌ ಎಂ. ಎ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಮೂಲಕ ಆಚರಣೆಗೆ ಸಾಂಕೇತಿಕ ಚಾಲನೆ ನೀಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್‌ ಘಟಕದ ನೋಡಲ್‌ ಅಧಿಕಾರಿ ಡಾ. ಗಣಪತಿ ಗೌಡ, ಕಾಲೇಜಿನ ರೆಡ್‌ಕ್ರಾಸ್‌ ಘಟಕದ ಸಂಯೋಜನಾಧಿಕಾರಿ ಡಾ. ಕುಮಾರಸ್ವಾಮಿ ಎಂ, ಎನ್‌ಎಸ್‌ಎಸ್‌ ಅಧಿಕಾರಿಗಳಾದ ಡಾ. ಗಾಯತ್ರಿ ಎನ್‌, ಡಾ. ಸುರೇಶ್‌, ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಜಯವಂತ ನಾಯ್ಕ್‌, ಇತಿಹಾಸ ವಿಭಾಗದ ಮುಖ್ಯಸ್ಥೆ  ಪಿ. ರಾಜೇಶ್ವರಿ, ರಸಾಯನಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಕೆ. ಲಕ್ಷ್ಮಣ್‌  ಮೊದಲಾದ ಹಿರಿಯ ಪ್ರಾಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.