ಮಂಗಳೂರು (ಅಕ್ಟೋಬರ್ 03):- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ದಿನಂದು ರಾಜ್ಯ ಮಟ್ಟದ  ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅಕ್ಟೋಬರ್ 17 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

       ಪರಿಶಿಷ್ಟ ಜನಾಂಗದ (Sಖಿ) ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಹೆಸರಿನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲು ಉದ್ದೇಶಿಸಿದ್ದು, ರಾಜ್ಯ ಮಟ್ಟದಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗಳು  ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ತಾಲೂಕಿನ ಸಹಾಯಕ ನಿರ್ದೇಶಕರು   ಸಮಾಜ ಕಲ್ಯಾಣ ಇಲಾಖೆ, ಆಥವಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು,  ದೂ. ಸಂಖ್ಯೆ: 0824-2451269 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.