ಮಂಗಳೂರು :- ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ:
ಜೂನ್ 03 ರಂದು ಮಂಗಳೂರಿಗೆ ಆಗಮಿಸಿ ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ – 19 ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ, ವಾಸ್ತವ್ಯ.
ಜೂನ್ 04 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ನಗರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ರಸ್ತೆ ಮೂಲಕ ತೆರಳುವರು.