ಮಂಗಳೂರು (ಸೆಪ್ಟೆಂಬರ್ 18):- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ವತಿಯಿಂದ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮತ್ತು ಅವರ ಕುಟುಂಬದ ಅವಲಂಬಿತರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಸಾಲಿನಲ್ಲಿ ಐರಾವತ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ(1 ಲಕ್ಷ ಸಹಾಯಧನ), ಸ್ವಯಂ ಉದ್ಯೋಗ ಯೋಜನೆ (ನೇರ ಸಾಲ 50,000) ಮೈಕ್ರೋಕ್ರೆಡಿಟ್ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಮತ್ತು ಭೂ ಒಡೆತನ ಯೋಜನೆಗಳಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸುತ್ತಿದ್ದು, ವೆಬ್‍ಸೈಟ್‍ಗಳಲ್ಲಿ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅವಶ್ಯ ದಾಖಲೆಗಳೊಂದಿಗೆ ಜಿಲ್ಲಾ ವ್ಯವಸ್ಧಾಪಕರ ಕಚೇರಿಯಲ್ಲಿ ಸಲ್ಲಿಸಬೇಕು ಅಥವಾ ನಿಗಮದ ವೆಬ್‍ಸೈಟ್ ಆದ http://ksskdc.kar.nic.in ನಲ್ಲಿ ಅಪ್‍ಲೋಡ್ ಮಾಡಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನ ಸೆಪ್ಟೆಂಬರ್ 30.
ಹೆಚ್ಚಿನ ಮಾಹಿತಿಗಾಗಿ ಡಾ:ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿ.ಹೆಚ್.ಎಸ್.ರಸ್ತೆ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಮಂಗಳೂರು ದೂರವಾಣಿ ಸಂಖ್ಯೆ: 0824-2420114 ಸಂಪರ್ಕಿಸಲು ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು ಇದರ ಜಿಲ್ಲಾ ವ್ಯವಸ್ಥಪಕರ ಪ್ರಕಟನೆ ತಿಳಿಸಿದೆ.