ಮಂಗಳೂರು:- ರಾಜ್ಯ ಸರಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟ ಜೂನ್ 4 ರಂದು ಹಮ್ಮಿಕೊಂಡಿರುವ ಅಖಿಲ ಭಾರತ ಪ್ರತಿಭಟನಾ ದಿನಾಚರಣೆಗೆ ದಕ್ಷಿಣ ಕನ್ನಡ ಸರಕಾರಿ ಡಿ ವರ್ಗ ನೌಕರರ ಸಂಘ ಹಾಗೂ ದ.ಕ. ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.