ಮಡಪ್ಪಾಡಿ: ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ ವಿಶೇಷಪ್ಯಾಕೇಜ್ ನೀಡುವ ನಿಟ್ಟಿನಲ್ಲಿ ಏನು ಮಾಡಲು ಸಾಧ್ಯವೇ ಎನ್ನುವುದರ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ, ವಿಶೇಷ ಫ್ಯಾಕೇಜ್‍ನ್ನು ಘೋಷಿಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳೊಂದಿಗೆ ಸಂವಾದ ಮತ್ತು ಸಮಾರೋಪ ಸಮಾರಂಭದಲ್ಲಿ ಜನರ ಪ್ರಶ್ನೆಗಳಿಗುತ್ತರಿಸಿದರು.
ಕೃಷಿಕ ವಲಯದಲ್ಲಿರುವ ಅಡಿಕೆ ಹಳದಿ ರೋಗ, ಕಾಡು ಪ್ರಾಣಿಗಳ ಹಾವಳಿ, ಕೋವಿ ಪರವಾನಿಗೆ ನಿಯಮ ಸೇರಿದಂತೆ ಕೃಷಿಕರ ಸಮಸ್ಯೆ ಪರಿಹಾರಕ್ಕೆ ಜ. 15 ರೊಳಗೆ ಜಿಲ್ಲಾ ಮಟ್ಟದಲ್ಲಿ ಸಭೆ ಕರೆಯಲಾಗುವುದು. ಆ ಬಳಿಕ ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಸುಳ್ಯ ಶಾಸಕ ಎಸ್.ಅಂಗಾರ ಮಾತನಾಡಿ, ಮಡಪ್ಪಾಡಿ ಗ್ರಾಮದಲ್ಲಿ 64 ಕಿಮೀ ಗ್ರಾಮೀಣ ರಸ್ತೆಗಳಿಗೆ. ಇದರಲ್ಲಿ ಪ್ರಮುಖವಾದ ರಸ್ತೆಗಳನ್ನು ಗುರುತಿಸಿ ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿ ನಾನಾ ಯೋಜನೆಗಳು ಫಲಾನುಭವಿಗಳಿಗೆ ವ್ಯಯಕ್ತಿಕವಾಗಿ ಲಭಿಸಿದ್ದ ಬಗ್ಗೆ ಸಮಗ್ರ ಮಾಹಿತಿಯನ್ನು ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಗ್ರಾ.ಪಂ.ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯ ಉದಯ ಕೊಪ್ಪಡ್ಕ, ಗ್ರಾ.ಪಂ.ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಎ.ಪಿ.ಎಂ.ಸಿ.ನಿರ್ದೇಶಕ ವಿನಯಕುಮಾರ್ ಮುಳುಗಾಡು, ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಂ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಸುಳ್ಯ ತಹಸೀಲ್ದಾರ್ ಕುಂಞÂ ಅಹಮ್ಮದ್, ಪುತ್ತೂರು ಡಿವೈಎಸ್‍ಪಿ ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಹಾಗೂ ಉಸ್ತುವಾರಿ ಸಚಿವರನ್ನು ಸನ್ಮಾನಿಸಲಾಯಿತು.ಜಿಲ್ಲಾ ಕಾರ್ಯಕಾರಣಿ ಸದಸ್ಯ ಲೋಕೇಶ್ ಪೆಲರ್ಂಪಾಡಿ ವಂದಿಸಿದರು. ಪತ್ರಕರ್ತ ಬಿ.ಎನ್.ಪುಷ್ಪಾರಾಜ್ ಕಾರ್ಯಕ್ರಮ ನಿರೂಪಿಸಿದರು.