ಉಡುಪಿ,(ಮಾರ್ಚ್ 6): ಸಮಾಜ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ಅನುಷ್ಟಾನಗೊಳ್ಳುತ್ತಿರುವ ಎಸ್‌ಸಿಎಸ್‌ಪಿ & ಟಿಎಸ್‌ಪಿ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ರಾಜ್ಯ ಮಟ್ಟದ ಸಮಾಜ ಕಲ್ಯಾಣ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಮಾರ್ಚ್ 8 ರಿಂದ ಸಂಜೆ 7.30 ರಿಂದ 8.30 ರ ವರೆಗೆ ಪ್ರತಿ ಸೋಮವಾರದಿಂದ ಗುರುವಾರದವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಾಯೋಜಿತ ಕಾರ್ಯಕ್ರಮ ನೀಡಲಿದ್ದು, ಸಾರ್ವಜನಿಕರು ಸದರಿ ಕಾರ್ಯಕ್ರಮವನ್ನು ವೀಕ್ಷಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
