ಉಡುಪಿ ಫೆಬ್ರವರಿ 11: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಬಯಸುವ ಹೊಸ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 14 ರ ವರೆಗೆ  ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.