ಮಂಗಳೂರು, ಫೆಬ್ರವರಿ 20 :- ಪ್ರಸ್ತುತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.sw.kar.nic.in ಅಥವಾ ಉಪನಿರ್ದೇಶಕರ ಕಚೇರಿ ಸಮಾಜ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಕಟ್ಟಡ ಉರ್ವಸ್ಟೋರ್ ಅಶೋಕ ನಗರ ಅಂಚೆ, ಮಂಗಳೂರು – 575006 ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.