ಮಂಗಳೂರು,(ಮಾರ್ಚ್ 19):- ಪ್ರಸ್ತುತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 6 ರಿಂದ 10ನೇ ತರಗತಿಯ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಇಲಾಖೆಯ ವೆಬ್‍ಸೈಟ್ www.sw.kar.nic.in ನಿಂದ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್ಸ್, ಅಶೋಕನಗರ ಅಂಚೆ, ಮಂಗಳೂರು ದೂ. ಸಂಖ್ಯೆ: 0824-2451237 ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.