ಉಡುಪಿ,(ಫೆಬ್ರವರಿ 24): ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ, ಫೆಬ್ರವರಿ 26 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 2.30 ಕ್ಕೆ ಕಾಪು ತಾಲೂಕು ಮಟ್ಟಾರಿನಲ್ಲಿ ನಡೆಯುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು, ಸಂಜೆ 4.30 ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ, 5.45 ಕ್ಕೆ ಜಿಲ್ಲಾ ಬಿ.ಜೆ.ಪಿ ಕಚೇರಿಗೆ ಭೇಟಿ ನೀಡಿ, ನಂತರ ಮಂಗಳೂರಿಗೆ ತೆರಳುವರು.