ಮಂಗಳೂರು,(ಮಾರ್ಚ್ 17):- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ಪರಿಶಿಷ್ಠ  ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ, ಉರ್ವಸ್ಟೋರ್, ಮಂಗಳೂರು ಕಚೇರಿಯ ದೂ. ಸಂಖ್ಯೆ: 0824-2451237  ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.